ಉಡುಪಿ: ಬ್ರಹ್ಮ ಬೈದರ್ಕಳ ನಗರ ಬಡಾವಣೆ ನಿವಾಸಿಗಳ ಸಂಘದ ಮಹಾಸಭೆಯು ಜುಲೈ 23 ರಂದು ಕಿನ್ನಿಮುಲ್ಕಿ ಶ್ರೀ ವೀರಭದ್ರ ಕಲಾ ಭವನದಲ್ಲಿ ಜರಗಿತು.
ನಗರಸಭೆ ಸದಸ್ಯೆ ಅಮೃತ ಕೃಷ್ಣಮೂರ್ತಿ ಆಚಾರ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಬಡಾವಣೆಯ ಅಭಿವೃದ್ಧಿಗಾಗಿ ಸರಕಾರದಿಂದ ಅನುದಾನ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದರು.
ಬಡಾವಣೆಯ ನಿವಾಸಿಗಳಲ್ಲಿ ಹತ್ತನೇ ತರಗತಿ ಹಾಗೂ ಪಿಯುಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅನಾರೋಗ್ಯದಿಂದ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಸಂಘದ ವತಿಯಿಂದ ಸಹಾಯಧನ ವಿತರಿಸಲಾಯಿತು. ಅ
ಅಧ್ಯಕ್ಷ ವಿಜಯ್ ಕುಮಾರ್ ಸ್ವಾಗತಿಸಿದರು. ಸಂಘದ ಜೊತೆ ಕಾರ್ಯದರ್ಶಿ ಪುಷ್ಪಲತಾ ತಂತ್ರಿ ವರದಿ ವಾಚಿಸಿದರು. ಕೋಶಾಧಿಕಾರಿ ಗುಣ ಪಾಲ್ ಲೆಕ್ಕಪತ್ರ ಮಂಡಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಶಿವಶಂಕರ್ ವಂದಿಸಿದರು. ಪುಷ್ಪಲತಾ ರಂಜನ್ ನಿರೂಪಿಸಿದರು.
2023- 24ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆಯಾದರು. ಸದಸ್ಯರಿಗೆ ವಿವಿಧ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.