ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕಿಶೋರ ಕನಕ ಕಾವ್ಯ
ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದ್ದು, 10 ರಿಂದ 15 ವರ್ಷದೊಳಗಿನ ಕಿಶೋರ ಪ್ರತಿಭೆಗಳಿಂದ ವೆಬ್ಸೈಟ್ https://kanakadasaresearchcenter.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 20 ರ ಒಳಗಾಗಿ ತಮ್ಮ ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ/ಕೊರಿಯರ್/ಖುದ್ದಾಗಿ ಅಥವಾ ಇ-ಮೇಲ್ [email protected] ಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:
6364529319 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.












