ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಕಾರ್ಯಕ್ರಮವನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹಿಸಿದರು.

ಶಾಸಕ ರಘುಪತಿ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಭ್ಯಾಗತರಾಗಿ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್, ಉಜ್ವಲ್ ಡೆವಲಪರ್ಸ್ ನ ಪುರುಷೋತ್ತಮ ಶೆಟ್ಟಿ, ಉಡುಪಿ ಕನ್ನಡ ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಭಾಗವಹಿಸಿದ್ದರು.

ಕಾರ್ಯದರ್ಶಿ ಮುರಲಿ ಕಡೆಕಾರ್ ಇವರು ಕಾರ್ಯಕ್ರಮ ನಿರೂಪಿಸಿದರು.