ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು,ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮವನ್ನು ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷ, ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು.
ಕರಾವಳಿಯ ಕಲೆಯಾದ ಯಕ್ಷಗಾನದಲ್ಲಿ ಕುಣಿತ, ಹಾಡುಗಾರಿಕೆ,ಸಂಭಾಷಣೆ ಮತ್ತು ತಾಳ ವಾದ್ಯಗಳಿಂದ ಎಲ್ಲ ರೀತಿಯ ದೈಹಿಕ ಹಾಗೂ ಮಾನಸಿಕವಾಗಿ ಮನರಂಜನೆಯೊಂದಿಗೆ ಬೌದ್ಧಿಕ ವಿಕಸನವಾಗಿ ಮಕ್ಕಳಿಗೆ ನೈತಿಕ ಶಿಕ್ಷಣಕ್ಕೆ ಸಹಕಾರಿಯಾಗಲಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಪೂರ್ಣಿಮಾ, ಮಂಗಳೂರಿನ ಉದ್ಯಮಿ ಗೋಕುಲನಾಥ ಪ್ರಭು, ಡಾ.ಜೆ.ಎನ್,ಭಟ್,ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್, ಉಪಾಧ್ಯಕ್ಷ ಎಸ್.ವಿ.ಭಟ್ ಮತ್ತು ವಿ.ಜೆ.ಶೆಟ್ಟಿ ಭಾಗವಹಿಸಿದ್ದರು.
ಸ್ಥಾಪಕಾಧ್ಯಕ್ಷ ಕೆ.ರಘುಪತಿ ಭಟ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕ ನಾರಾಯಣ ಹೆಗಡೆ ನಿರೂಪಿಸಿ, ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು.












