ಉಳ್ಳಾಲ: ಇಲ್ಲಿನ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ನಿನ್ನೆ ತಡರಾತ್ರಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕರಿಬ್ಬರಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಡೆದಿದೆ.
ಚೂರಿ ಇರಿತಕ್ಕೊಳಗಾದವರನ್ನು ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಹಾಗೂ ಪಂಡಿತ್ ಹೌಸ್ ನಿವಾಸಿ ಪವನ್(27) ಎಂದು ಗುರುತಿಸಲಾಗಿದೆ. ಈ ಇಬ್ಬರು ತಮ್ಮ ಸಹೋದರರನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳಿಬ್ಬರು ಬೈಕ್ ಡಿಕ್ಕಿ ಹೊಡೆದು ಬಳಿಕ ಯುವಕರಿಗೆ ಚೂರಿಯಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡ ಇಬ್ಬರು ಯುವಕರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.