ಉಡುಪಿ: ಕೊಡವೂರು ಶಾಲಾ ಬಳಿ ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿ ಕಟ್ಟಡ “ಸಮೃದ್ಧಿ” ಇದರ ಉದ್ಘಾಟನಾ ಸಮಾರಂಭವು ಡಿಸೆಂಬರ್ 7ರಂದು ಬೆಳಿಗ್ಗೆ 10ಕ್ಕೆ ಜರಗಲಿದೆ.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡ, ಆಡಳಿತ ಮಂಡಳಿ ಸಭಾಂಗಣವನ್ನು ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ದೀಪ ಪ್ರಜ್ವಲಿಸಲಿದ್ದು, ಶಾಸಕ ಯಶ್ಪಾಲ್ ಎ. ಸುವರ್ಣ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘ ಅಧ್ಯಕ್ಷ ಕೆ. ನಾರಾಯಣ ಬಲ್ಲಾಳ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ವಿವಿಧ ವಿಭಾಗಗಳ ಉದ್ಘಾಟನೆ:
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭದ್ರತಾ ಕೊಠಡಿ, ಮಾಜಿ ಸಂಸದ ಕೆ ಜಯಪ್ರಕಾಶ್ ಹೆಗ್ಡೆ ಗ್ರಾಹಕರ ಭದ್ರತಾ ಕೋಶ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಂಪ್ಯೂಟರ್, ಮಾಜಿ ಶಾಸಕ ಕೆ ರಘುಪತಿ ಭಟ್ ಲಿಫ್ಟ್, ಪುತ್ತೂರು ಸರಸ್ವತಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ನವೋದಯ ಪ್ರೇರಕರ ಕಚೇರಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಿನಿ ಸಭಾಂಗಣ, ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ನಿರ್ದೇಶಕಿ ಪ್ರೊ. ಡಾ. ನಿರ್ಮಲಾ ಕುಮಾರಿ ಕಡತಗಳ ಕೊಠಡಿ, ಆಹಾರ ತಾಲೂಕು ಕಛೇರಿಯ ಉಪ ತಹಶೀಲ್ದಾರ್ ಆಶಾ ಕೆ. ಪಡಿತರ ಗೋದಾಮನ್ನು ಉದ್ಘಾಟಿಸಲಿದ್ದಾರೆ.
ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳವು, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಕೊಡವೂರು, ಉಡುಪಿ ತಾಲೂಕು ವ್ಯವಸಾಯ – ಉತ್ಪನ್ನ ಮಾರಾಟ ಸಂಘದ ಅಧ್ಯಕ್ಷ ಬಿ. ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ದ.ಕ. ಜಿಲ್ಲಾ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕರಾದ ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್ ರಾವ್ ಪಾಂಗಾಳ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ. ಆರ್., ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್, ಸಂಘದ ಉಪಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಪಾಲ್ಗೊಳ್ಳಲಿರುವರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9.00ರಿಂದ ಸುಗಮ ಸಂಗೀತ ಮಧ್ಯಾಹ್ನ 2.00ರಿಂದ ಯಕ್ಷಗಾನ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ಕೆ.ನಾರಾಯಣ ಬಲ್ಲಾಳ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಜತ್ತನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

















