ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ವಿಮೆ ವಿತರಣೆ

ಉಡುಪಿ: ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ವತಿಯಿಂದ ವಿವೇಕಾನಂದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಜ್ಜರಕಾಡು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ವಿಮೆ ವಿತರಣಾ ಕಾರ್ಯಕ್ರಮವು ಜುಲೈ 06 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗುಂಡಿಬೈಲು ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ಪ್ರೀತಿ ತಂಗಪ್ಪನ್ ( ಹ್ಯೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ), ಪತ್ರಕರ್ತ ಜನಾರ್ಧನ ಕೊಡವೂರು, ಉದಯ್ ನಾಯ್ಕ್ ( ಹಿರಿಯ ಮಾರುಕಟ್ಟೆ ಪ್ರಬಂಧಕರು ಸ್ಟಾರ್ ಹೆಲ್ತ್), ಸಂಚಾಲಕ ಅಜಿತ್ ಕುಮಾರ್ ಕೊಡವೂರು, ಶಾಲಾ ಅಭಿವೃದ್ದಿ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್, ಶಾಲೆಯ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.