ಉಡುಪಿ: ಕೊಕ್ಕರ್ಣೆ ನಿರಂತರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳ ಆರೋಗ್ಯ ಕ್ಷೇತ್ರದ ಯೋಜನೆಯ ಫಲಾನುಭವಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಸಲಕರಣೆ ಹಾಗೂ ಉಚಿತ ಶಸ್ತ್ರಚಿಕಿತ್ಸೆಯು ಕೊಕ್ಕರ್ಣೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಫೆ. 21ರಂದು ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ನಡೆಯಲಿದೆ ಎಂದು ಟ್ರಸ್ಟ್ ಸ್ಥಾಪಕಾಧ್ಯಕ್ಷ ನಿರಂಜನ್ ಶೆಟ್ಟಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಳಗ್ಗೆ 10ಕ್ಕೆ ಬಾರ್ಕೂರಿನ ಭಂಡಾರಕೇರಿ ಠದ ಶ್ರೀ ವಿದ್ಯೇಶತೀರ್ಥ ಶ್ರೀಪಾದರು ಉದ್ಘಾಟಿಸಿವರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಹಿಂದುಳಿದ ವರ್ಗದ ಆರೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಸುಧೀರ್ಚಂದ್ರ ಸೂಡ, ಉದ್ಯಮಿ ಬಿ. ಶ್ರೀನಿವಾಸ ಹೆಗ್ಡೆ, ಕೊಕ್ಕರ್ಣೆಯ ಸರಕಾರಿ ಪ.ಪೂ.ಕಾಲೇಜಿನ ಪ್ರಾಾಂಶುಪಾಲ ಶ್ರೀಧರ ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಾಲಕೃಷ್ಣ ಹೆಗಡೆ, ಕಮಲಾಕ್ಷ ಹೆಬ್ಬಾರ್, ಗುರುದತ್ತ ಅಡಿಗ ಇದ್ದರು.