ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ “ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಸಂಘ” ಪ್ರಶಸ್ತಿ

ಉಡುಪಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಮಹಾಸಭೆಯಲ್ಲಿ ಶನಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ “ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಸಹಕಾರಿ ಸಂಘ” ಪ್ರಶಸ್ತಿ ಪಡೆಯಿತು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ಅಡಿಗ ಕೆ.ಎನ್ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಗಣೇಶ್ ಶ್ಯಾನುಭೋಗ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು.