ಹಿರಿಯಡಕ: ಕೊಂಡಾಡಿ ಭಜನೆಕಟ್ಟೆ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ(ರಿ) ಇವರ ವತಿಯಿಂದ ಸಂಘದ ಕಟ್ಟಡದ ಅಭಿವೃದ್ಧಿಯ ಬಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಏ.5 ಆದಿತ್ಯವಾರದಂದು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ನ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು 21 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಸರಕಾರ ಮುಂದಿನ ಆದೇಶದ ವರೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮಯನ್ನು ಮುಂದೂಡಲಾಗಿದೆ.
ಪೂಜೆಗೆ ಸಹಕರಿಸಿದ ದಾನಿಗಳು ಹಾಗೂ ಪೂಜಾ ರಶೀದಿಯನ್ನು ಪಡೆದು ಕೊಂಡವರು ಸಹಕರಿಸಬೇಕು ಎಂದು ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ಅಧ್ಯಕ್ಷರಾದ ರಾಮಚಂದ್ರ ಆಚಾರ್ಯ ಮಾಣೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.