ಕಾರ್ಕಳ: ಫೆ. 22 ಮತ್ತು 23 ರಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜರಗಲಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಬೆಳ್ಳಿಹಬ್ಬ ಮತ್ತು ಕೊಂಕಣಿ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಬೆಂಗಳೂರಿನ ಮುಖ್ಯ ಮಂತ್ರಿಗಳ ನಿವಾಸದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಕೆ.ಜಗದೀಶ್ ಪೈ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ ನೀಡಿದರು.