ಕೊರೋನಾ ಭೀತಿ: ನಾಳೆಯಿಂದ ಚಿತ್ರಮಂದಿರ, ಮಾಲ್, ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಬಂದ್ !

ಬೆಂಗಳೂರು: ಕೊರೋನಾ ಭೀತಿ ದಿನ ಕಳೆದಂತೆ ಹೆಚ್ಚಾಗುತ್ತಿದ್ದು  ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆಸರ್ಕಾರ ಆದೇಶಿಸಿದೆ. ಮದುವೆ, ಸಭೆ-ಸಮಾರಂಭಗಳನ್ನು ರದ್ದು ಮಾಡುವಂತೆ ಸರ್ಕಾರ ಹೇಳಿದೆ.

ಈ ವಿಷಯವನ್ನು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಒಂದು ವಾರಗಳ ಕಾಲ ಕ್ರೀಡಾ ಕಾರ್ಯಕ್ರಮಗಳು, ನೈಟ್ ಕ್ಲಬ್, ಪಬ್, ಮೇಳ, ಸೆಮಿನಾರ್ ಗಳು, ನಿಶ್ಚಿತಾರ್ಥ ಕಾರ್ಯಕ್ರಮಗಳು ಮತ್ತು ಜಾತ್ರೆಗಳನ್ನು ಬಂದ್ ಮಾಡಲಾಗುತ್ತಿದೆ. ಒಂದು ವಾರದ ನಂತರ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿ.ಎಂ ತಿಳಿಸಿದ್ದಾರೆ.