ಕೆ.ಓ.ಎಸ್ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ ಕೆ.ಓ.ಎಸ್ ಪರೀಕ್ಷೆಯು ಆಗಸ್ಟ್ 24 ರಿಂದ ಸೆಪ್ಟಂಬರ್ 3 ರ ವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಇಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ಶಾಂತಿಯುತವಾಗಿ ಹಾಗೂ ದೋಷರಹಿತವಾಗಿ ನಡೆಸಲು ಮತ್ತು ಯಾವುದೇ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.