ಉಡುಪಿ, ಮೇ 30: ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಹಾಗೂ ಗ್ರಾಮ ಪಂಚಾಯತ್ ಯಡ್ತಾಡಿ ಇವರ ಸಹಯೋಗದಲ್ಲಿ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷವಾಕ್ಯದಡಿಯಲ್ಲಿ ಜೂನ್ 6 ರಂದು ಬೆಳಗ್ಗೆ 10.30 ಕ್ಕೆ ಯಡ್ತಾಡಿ ಗ್ರಾಮ ಪಂಚಾಯತ್ ಸಭಾಭವನ (ಸಾೈಬರಕಟ್ಟೆ) ದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಯಡ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.