ಉಡುಪಿ: ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 30 ರಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಕೋಟದ ತಮ್ಮ ನಿವಾಸದಲ್ಲಿ ಸ್ವಯಂ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಕಳೆದ ಐದು ದಿನಗಳಲ್ಲಿ ಯಾವುದೇ ರೋಗಲಕ್ಷಣ ಕಂಡುಬಂದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.