ವಿಧಾನ ಪರಿಷತ್ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ದ್ವಿಸದಸ್ಯ ಕ್ಷೇತ್ರ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ನಾಮಪತ್ರ ಸಲ್ಲಿಸಿದರು.

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಚುನಾವಣಾಧಿಕಾರಿ ಆಗಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಕೋಟ ಅವರು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಇತರ ಮುಖಂಡರು ಇದ್ದರು.

ಹಿರಿಯರ ಆಶೀರ್ವಾದ ಪಡೆದ ಕೋಟ:

ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿ ಹಿರಿಯ ನಾಯಕರು, ಉಡುಪಿ ಪುರಸಭಾ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಆಗಮಿಸಿ ಆಶೀರ್ವಾದ ಪಡೆದರು. ಈ ವೇಳೆ ಸೋಮಶೇಖರ್ ಭಟ್ ಅವರು, ಕೋಟ ಅವರು ಅತ್ಯಂತ ಹೆಚ್ಚು ಅಂತರದಿಂದ ಗೆದ್ದು ಬಂದು ಮತ್ತಷ್ಟು ರಾಜ್ಯದ ಜನಸೇವೆ ಮಾಡುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯಿತ್ ಅಧ್ಯಕ್ಷರಾದ ಕೃಷ್ಣ ಗೊಲ್ಲ ಇನ್ನಿತರರು ಉಪಸ್ಥಿತರಿದ್ದರು.