ಕೋಟ: ಸಾಲದ ಸುಳಿಗೆ ಸಿಲುಕಿದ ಬಿಲ್ಡಿಂಗ್ ಕಂಟ್ರಾಕ್ಟರ್ ಒಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲ್ಲೂಕಿನ ಸಾಸ್ತಾನದ ಪಾಂಡೇಶ್ವರ ಶಾಲೆಯ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬ್ರಹ್ಮಾವರ ತಾಲ್ಲೂಕಿನ ಸಾಸ್ತಾನದ ಪಾಂಡೇಶ್ವರ ನಿವಾಸಿ ಬಿಲ್ಡಿಂಗ್ ಕಂಟ್ರಾಕ್ಟರ್ ಅಬ್ಬಾಸ್ (53) ಎಂದು ಗುರುತಿಸಲಾಗಿದೆ. ಅಬ್ಬಾಸ್ ವ್ಯವಹಾರದಲ್ಲಿ ಆದ ನಷ್ಟದಿಂದ ಸಾಲದ ಸುಳಿಗೆ ಸಿಲುಕಿಕೊಂಡಿದ್ದರು.
ಸಾಲ ತೀರಿಸಲಾಗದೆ ತುಂಬಾ ನೊಂದುಕೊಂಡಿದ್ದು, ಇದೇ ಕಾರಣದಿಂದ ಅ. 22ರಂದು ಮಧ್ಯಾಹ್ನ 3.30ರ ಸುಮಾರಿಗೆ ಪಾಂಡೇಶ್ವರ ಶಾಲೆಯ ಪಕ್ಕದಲ್ಲಿರುವ ಬಾವಿಗೆ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.