ಪೆರಂಪಳ್ಳಿ: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಪೆರಂಪಳ್ಳಿ ಬಿಜೆಪಿ ಘಟಕದ ವತಿಯಿಂದ ಕಾರ್ಯಕರ್ತರು ಪೆರಂಪಳ್ಳಿ ಪೇಟೆಯಲ್ಲಿ ಸಂಭ್ರಮಾಚರಣೆ ನಡೆಸಿದರು.
ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.