ಉಡುಪಿ, ಜುಲೈ 26: ಕೋಟ ಮಣೂರು ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯು ಗುರುವಾರ ನಡೆಯಿತು.
ಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಸದಸ್ಯೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಉದ್ಘಾಟಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೋಟ ಮಣೂರು ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ್ ಕರಪತ್ರ ಬಿಡುಗಡೆಗೊಳಿಸಿ, ಕಾರ್ಯಕ್ರಮದ ಕುರಿತು ಮಾತನಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಕಾಲೇಜಿನ ವಿದ್ಯಾರ್ಥಿಗಳಿಗೆ ನಡೆಸಿದ ರಸಪ್ರಶ್ನೆ ಸ್ಪರ್ದೆಯಲ್ಲಿ ವಿಜೇತರಾದ ಪ್ರಥಮ ಬಿ.ಎ. ವಿದ್ಯಾರ್ಥಿನಿಯರಾದ ಪದ್ಮಾವತಿ (ಪ್ರಥಮ), ರಕ್ಷಿತಾ.ಕೆ (ದ್ವಿತೀಯ), ಜ್ಯೋತಿ (ತೃತೀಯ) ಇವರಿಗೆ ಬಹುಮಾನ ವಿತರಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ವಿಶ್ವ ಜನಸಂಖ್ಯಾ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದರು.
ತಾಲೂಕು ಹಿರಿಯ ಮಹಿಳಾ ಆರೊಗ್ಯ ಸಹಾಯಕಿ ತುಳಸಿ ಪೋಕಳೆ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಂಜಿತ ಕುಮಾರ, ಕೋಟ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಪುರುಷ ಆರೋಗ್ಯ ಸಹಾಯಕರಾದ ಹರೀಶ್ಚಂದ್ರ, ಜಗದೀಶ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ಉಡುಪಿ ಹಿರಿಯ ಪುರುಷ ಆರೋಗ್ಯ ಸಹಾಯಕ ದೇವಪ್ಪ ಪಟೇಗಾರ್ ನಿರೂಪಿಸಿದರು. ಕಾಲೇಜಿನ ಸಹ ಪ್ರಾಧ್ಯಾಪಕ ಮಂಜುನಾಥ ಆಚಾರ್ಯ ವಂದಿಸಿದರು.