ಕಾಪು: ಕೋಟೆ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ವಿದ್ಯಾ ಗಿರೀಶ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳನ್ನು ಮೆಚ್ಚಿ ವಿನಯ್ ಕುಮಾರ್ ಸೊರಕೆಯವರ ಕಾರ್ಯವೈಖರಿ ಮತ್ತು ಜನಪರ ಕಾಳಜಿಗೆ ಮನ್ನಣೆ ನೀಡಿ, ಜೊತೆಗೆ ಕೋಟೆ ಗ್ರಾಮದ ಸಮಗ್ರ ಅಭಿವೃದ್ದಿಯ ಉದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದೇನೆ ಎಂದರು.
ಕಾಪು ರಾಜೀವ್ ಭವನದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ವಿ.ಪ. ಸದಸ್ಯ ಐವನ್ ಡಿಸೋಜ, ಕೆ. ಪಿ. ಸಿ.ಸಿ ಪ್ರ ಕಾರ್ಯದರ್ಶಿ ಎಂ.ಎ. ಗಫೂರ್, ಬ್ಲಾಕ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಕಾಂಗ್ರೆಸ್ ಧ್ವಜವನ್ನು ಸ್ವೀಕರಿಸುವ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.