ವಕ್ವಾಡಿಯ ಬಾಂಡ್ಯಾ ಎಜ್ಯುಕೇಶನ್ ಟ್ರಸ್ಟ್ ನ  ಗುರುಕುಲ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕುಂದಾಪುರ: ತಾಲೂಕಿನ ಕೋಟೇಶ್ವರ ಸಮೀಪದ ವಕ್ವಾಡಿ ಬಾಂಡ್ಯಾ ಎಜ್ಯುಕೇಶನ್ ಟ್ರಸ್ಟ್ ನ ಗುರುಕುಲ ಪದವಿಪೂರ್ವ ಕಾಲೇಜು 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ ಶೇಕಡ 100 ಪರ್ಸೆಂಟ್ ವಾಣಿಜ್ಯ ವಿಭಾಗದಲ್ಲಿ ಶೇ.100, ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶವನ್ನು ವಿದ್ಯಾರ್ಥಿಗಳು ದಾಖಲಿಸಿದ್ದಾರೆ.
ಒಟ್ಟು ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಲ್ಲಿ ಶೇ.33ರಷ್ಟು ಉನ್ನತ ಶ್ರೇಣಿಯಲ್ಲಿ, ಶೇ.67ರಷ್ಟು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಸಂಸ್ಥೆಯ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.