ಮೆಸ್ಕಾಂ ಸಿಬ್ಬಂದಿಗಳಿಂದ ಕೋಟಿ ಕಂಠ ಗಾಯನ

ಉಡುಪಿ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಉಡುಪಿ ವೃತ್ತದ ಅಧೀಕ್ಷಕ ಇಂಜಿನಿಯರ್ ದಿನೇಶ್ ಉಪಾಧ್ಯಾಯರವರ ಮಾರ್ಗ ದರ್ಶನದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಶುಕ್ರವಾರದಂದು ಉಡುಪಿ ಮೆಸ್ಕಾಂ ಕಚೇರಿ ಆವರಣದಲ್ಲಿ ನಡೆಯಿತು.

ಮಹಿಳೆಯರು ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಕನ್ನಡ ಭಾಷೆಯ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೆ ಪ್ರಸನ್ನಕುಮಾರ್, ಗಣರಾಜ್ ಭಟ್ ಹಾಗೂ ವಿವಿಧ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.