ಬ್ರಹ್ಮಾವರ: 67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶುಕ್ರವಾರದಂದು ಎಸ್ ಎಂ ಎಸ್ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರು ,ಅಧ್ಯಾಪಕೇತರ ವೃಂದದವರು ಹಾಗೂ 800 ವಿದ್ಯಾರ್ಥಿಗಳು ಭಾಗವಹಿಸಿದರು. ಈ ವಿಶೇಷ ಕಾರ್ಯಕ್ರಮದಲ್ಲಿ ಸರಕಾರದ ಆದೇಶದಂತೆ ಕನ್ನಡ ನಾಡು ನುಡಿ ಶ್ರೇಷ್ಠತೆಯನ್ನು ಸಾರುವ 6 ಗೀತೆಗಳನ್ನು ಹಾಡಲಾಯಿತು ಹಾಗೂ ಕನ್ನಡ ನಾಡು-ನುಡಿ ಉಳಿಸಲು ಬದ್ಧರಾಗಿರುವುದಾಗಿ ಪ್ರತಿಜ್ಞೆ ಮಾಡಲಾಯಿತು.