ಕೋಟಿಲಿಂಗೇಶ್ವರ ರಥೋತ್ಸವ: ಮದ್ಯ ಮಾರಾಟ ನಿಷೇಧ

ಉಡುಪಿ: ಕೋಟೇಶ್ವರ ಗ್ರಾಮದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮವು ನವೆಂಬರ್ 18 ರಿಂದ 20 ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಕುಂದಾಪುರ ಪೊಲೀಸ್ ಠಾಣಾ ಸರಹದ್ದಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯ ಮಾರಾಟವನ್ನು ನವೆಂಬರ್ 18ರ ಬೆಳಿಗ್ಗೆ 6 ರಿಂದ ನವೆಂಬರ್ 19 ರ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚುವಂತೆ ಹಾಗೂ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.