ಮುಖ್ಯಮಂತ್ರಿ ಯಡಿಯೂರಪ್ಪಗೆ ಮತ್ತೆ ಕೋವಿಡ್ ದೃಢ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಮತ್ತೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಯಡಿಯೂರಪ್ಪ ಅವರ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ. ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್‌ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.