ಶಿವಮೊಗ್ಗ: ಇಲ್ಲಿಯ ಗಾಡಿಕೊಪ್ಪ ಸಮೀಪದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ 29 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ವಸತಿನಿಲಯದಲ್ಲಿದ್ದ 384 ವಿದ್ಯಾರ್ಥಿಗಳಿಗೆ ಬುಧವಾರ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಆ ಪೈಕಿ ನ.23ರಂದು ಕೇರಳದಿಂದ ವಾಪಸಾಗಿದ್ದ 23 ನರ್ಸಿಂಗ್ ವಿದ್ಯಾರ್ಥಿಗಳು ಸೇರಿ ಒಟ್ಟು 29 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.