ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ಈ ಕುರಿತು ಸ್ವತಃ ಸಚಿವರು ಟ್ವಿಟರ್ ಮಾಡಿ ಮಾಹಿತಿ ನೀಡಿದ್ದಾರೆ. ತನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಸಚಿವ ಸುನಿಲ್ ಕುಮಾರ್ ಗೆ ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿದ್ದು, ಕಳೆದ ವರ್ಷ ಕೂಡ ಸಚಿವರು ಸೋಂಕಿಗೆ ತುತ್ತಾಗಿದ್ದಾರೆ.