ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಎನ್ ಸಿಸಿ, ಎನ್ ಎಸ್ ಎಸ್ ,ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಅಭಿಯಾನವನ್ನು ಆಯೋಜಿಸಲಾಯಿತು.
ಕಾಲೇಜು ಪುನರಾರಂಭದ ಪೂರ್ವವಾಗಿ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ, ಭೋದಕೇತರ ಸಿಬ್ಬಂದಿಗೆ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕೆ ನೀಡಲಾಯಿತು.

ಕಾಲೇಜು ಆಡಳಿತ ಮಂಡಳಿಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾಕರಣ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆರಾಲ್ಡ್ ಐವನ್ ಮೋನಿಸ್ ಮಾತನಾಡಿ, ಕೋವಿಡ್ 19 ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕಾದರೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವುದು ಅಗತ್ಯ ಎಂದರು.

ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ಭಟ್, ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಯಶೋದಾ, ಎನ್‍ಎಸ್‍ಎಸ್ ಅಧಿಕಾರಿಗಳಾದ ಪ್ರೇಮನಾಥ್, ರಕ್ಷಾ, ಶ್ರೀಸ್ಯಾಮ್ ಜೋಯಲ್ ಡಯಾಸ್, ಯೂತ್ ರೆಡ್ ಕ್ರಾಸ್ ಸಂಯೋಜಕ ಶ್ರೀಮುರಳಿ, ರೋವರ್ಸ್-ರೇಂಜರ್ಸ್ ಲೀಡರ್ ಗಳಾದ ಪ್ರಕಾಶ್, ಸಂಗೀತ ಪೂಜಾರಿ, ಸಮಾಜ ಸೇವಕ ಪವನ್ ಕುಮಾರ್ ಶಿರ್ವ, ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಸುಧಾ, ವಿನಯ, ಸಂಜಯ್, ದಿನೇಶ್ ಹಾಗೂ ಆಶಾ ಕಾರ್ಯಕರ್ತರಾದ ಅಮಿತ, ಪಾರ್ವತಿ, ರೆಹೆಮತ್ ಲಸಿಕಾ ಶಿಬಿರವನ್ನು ನೆರವೇರಿಸಿಕೊಟ್ಟರು.

















