ರಾಜ್ಯಕ್ಕೆ ಕೋವಿಡ್ ಎರಡನೇ ಅಲೆಯ ಭೀತಿ: ಕಠಿಣ ನಿಯಮದ ಅಸ್ತ್ರ ಪ್ರಯೋಗಿಸಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ.

ಮಧ್ಯಾಹ್ನದ ವೇಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಆರೋಗ್ಯ ಸಚಿವ ಡಾ. ಸುಧಾಕರ್ ಈಗಾಗಲೇ ಹೊಸ ಮಾರ್ಗಸೂಚಿ ಪ್ರಕಟಿಸುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ 3 ಸಾವಿರ ಕೇಸ್ ಗಳು ದಾಖಲಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಲು ಚಿಂತಿಸಿದೆ. ಈ ಬಗ್ಗೆ ಸಿಎಂ ಅವರು ಮಧ್ಯಾಹ್ನ ವಿಶೇಷ ಕೋವಿಡ್ ಸಭೆ ನಡೆಸಿ ಹೊಸ ಗೈಡ್ ಲೈನ್ಸ್ ಗಳನ್ನು ಪ್ರಕಟಿಸಲಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇವುಗಳಿಗೆ ನಿರ್ಬಂಧ ಹೇರುವ ಸಾಧ್ಯತೆ:
ಹೊಸ ನಿಯಮ ಜಾರಿಗೊಳಿಸಿದರೆ, ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳಿಗೆ ಕಠಿಣ ನಿಯಮದ ಅಸ್ತ್ರದ ಪ್ರಯೋಗ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ, ಥಿಯೇಟರ್ ಗಳಲ್ಲಿ‌ ಶೇ. 50ಕ್ಕೆ ಸೀಟ್ ಗಳ ಸಂಖ್ಯೆ ಇಳಿಸುವ ಸಾಧ್ಯತೆ ಇದೆ. ಪಾರ್ಕ್ ಗಳಿಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.