ಬೆಂಗಳೂರು: ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಇಂಧನ ಸಚಿವ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ. ಫಲಿತಾಂಶವನ್ನು ತಿಳಿಯಲು https://cetonline.karnataka.gov.in/kea/kptcl2022 ಲಿಂಕ್ ಅನ್ನು ಕ್ಲಿಕ್ ಮಾಡಿ ಎಂದು ಅವರು ಟ್ವೀಟ್ ಮಾಡಿದ್ದಾರೆ.