ಏಕಲವ್ಯ/ ಜೀವಮಾನ ಸಾಧನೆ ಹಾಗೂ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉಡುಪಿ, ಮೇ 28: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪ್ರತಿ ವರ್ಷ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಕರ್ನಾಟಕದಿಂದ ಆಯ್ಕೆಯಾಗಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರತೀವರ್ಷ ಏಕಲವ್ಯ ಪ್ರಶಸ್ತಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ / ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಜೀವನ ಪರ್ಯಂತ ಸಾಧನೆ ಮಾಡಿದಂತಹ ಹಿರಿಯ ತರಬೇತುದಾರರಿಗೆ ಕ್ರೀಡಾ ಕ್ಷೇತ್ರದಲ್ಲಿ ಜೀವನ ಪರ್ಯಂತ ಸಾಧನೆ ಪ್ರಶಸ್ತಿ ಮತ್ತು ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ,

ಕರ್ನಾಟಕ ಸರ್ಕಾರದ ವತಿಯಿಂದ ಏಕಲವ್ಯ ಪ್ರಶಸ್ತಿ ಹಾಗೂ ಹಿರಿಯ ಕ್ರೀಡಾಪಟು/ ತರಬೇತುದಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುವುದು. ಅರ್ಹ ಕ್ರೀಡಾಪಟುಗಳು ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಕಚೇರಿ ಅಧಿಕೃತ ವೆಬ್‍ಸೈಟ್ http://serviceonline.gov.in/Karnataka ಮೂಲಕ ಹಾಗೂ ಏಕಲವ್ಯ ಪ್ರಶಸ್ತಿಗಾಗಿ www.karnataka.gov.in/dyes ಮೂಲಕ ಪ್ರಸ್ತಾವನೆಗಳನ್ನು ಜೂನ್ 15 ರ ಒಳಗಾಗಿ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಸಲ್ಲಿಸಿದ ಪ್ರಸ್ತಾವನೆಗಳ ಯಥಾಪ್ರತಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಈ ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ (ದೂರವಾಣಿ ಸಂಖ್ಯೆ; 0820-2521324, 9480886467) ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.