ಶ್ರೀ ಕೃಷ್ಣ ಮಠದಲ್ಲಿ : ವಿಶೇಷ ಭಜನಾ ಕಾರ್ಯಕ್ರಮ

ಉಡುಪಿ:  ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜಯಂತಿಯ ಪ್ರಯುಕ್ತ  ಶ್ರೀ ಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ  ಹಮ್ಮಿ ಕೊಂಡಿರುವ ಭಜನಾ ಕಾರ್ಯಕ್ರಮವನ್ನು ಪರ್ಯಾಯ ಶ್ರೀ ವಿದ್ಯಾಧೀಶ  ತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ಯಶಪಾಲ್ ಸುವರ್ಣ,ಗೋಪಾಲ್ ಕುಂದರ್,ಭಾಸ್ಕರ ಕಿದಿಯೂರು,ಶಿವರಾಮಅಂಬಲ್ಪಾಡಿ, ಸಿ.ಸಿ.ಕರ್ಕೇರ, ಭೋಜರಾಜ್ ಕಿದಿಯೂರು, ಸುಧಾಕರ ಮೆಂಡನ್, ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು. ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಿತು.