ಶ್ರೀ ಕೃಷ್ಣ ಮಠ: ಚಿಟ್ಟಾಣಿ ಸಂಸ್ಮರಣಾ ಸಪ್ತಾಹ ಉದ್ಘಾಟನೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ, ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ, ಬಂಗಾರಮಕ್ಕಿ ಮತ್ತು ಅತಿಥಿ ಕಲಾವಿದರ ಸಹಯೋಗದೊಂದಿಗೆ ಚಿಟ್ಟಾಣಿ ಅಭಿಮಾನಿ ಬಳಗ,ಉಡುಪಿ ಆಯೋಜಿಸುತ್ತಿರುವ ಚಿಟ್ಟಾಣಿ ಸಂಸ್ಮರಣಾ ಸಪ್ತಾಹ – 2019 ,ಈ ಕಾರ್ಯಕ್ರಮವನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು,ಪ್ರಯಾಗದ ಶ್ರೀ ವಿದ್ಯಾತ್ಮತೀರ್ಥ ಶ್ರೀಪಾದರು ಮತ್ತು ವಿಜಯಕುಮಾರ್ ಮುದ್ರಾಡಿ,ತಲ್ಲೂರು ಶಿವರಾಂ ಶೆಟ್ಟಿ ,ಗಂಗಾಧರ ರಾವ್ ಉಪಸ್ಥಿತರಿದ್ದರು.ನಾರಾಯಣ ಎಂ.ಹೆಗಡೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.