ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀಹೃಷಿಕೇಶತೀರ್ಥ ಪೀಠಮ್ ಪರ್ಯಾಯ ಶ್ರೀಪಲಿಮಾರು ಮಠ ಶ್ರೀಕೃಷ್ಣಮಠದ ಆಶ್ರಯದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ ಕಾರ್ಯಕ್ರಮಗಳ ಎರಡನೆಯ ದಿನದಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಸಮಾರಂಭದಲ್ಲಿ ಕಟೀಲು ದೇವಸ್ಥಾನದ ಅರ್ಚಕರಾದ ವಾಸುದೇವ ಅಸ್ರಣ್ಣ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಗುರ್ಮೆ ಸುರೇಶ ಶೆಟ್ಟಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಿಟ್ಟೆ ವಿನಯ್ ಹೆಗ್ಡೆ, ಹಿಂದುಸ್ಥಾನಿ ಗಾಯಕರಾದ ಉಸ್ತಾದ್ ಫಿಯಾಜ್ ಖಾನ್, ನಗರಸಭಾದ ಕೃಷ್ಣರಾವ್ ಕೊಡಂಚ,ಟೌನ್ ಕೋ-ಓಪರೇಟಿವ್ ಬ್ಯಾಂಕ್ ನ ಬಿ.ವಿ ಲಕ್ಷ್ಮಿನಾರಾಯಣ, ನ್ಯಾಯವಾದಿ ಪ್ರದೀಪ್ ಕುಮಾರ್,ಮೂಡುಬಿದ್ರೆಯ ಶ್ರೀಪತಿ ಭಟ್ ಇವರನ್ನು ಸನ್ಮಾನಿಸಲಾಯಿತು.