ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಬೆಳಿಗ್ಗೆ ರಥಬೀದಿಯಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ಮೂರ್ತಿಯನ್ನಿಟ್ಟು ವಿಶೇಷ ರಥೋತ್ಸವವು ನಡೆಯಿತು.ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀ ಪಾದರು,ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀ ಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀ ಪಾದರು ಪಾಲ್ಗೊಂಡಿದ್ದರು.