ಶ್ರೀ ಕೃಷ್ಣ ಮಠದಲ್ಲಿ ತೆಪ್ಪೋತ್ಸವ – ಲಕ್ಷ ದೀಪೋತ್ಸವ ಸಂಭ್ರಮ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು  ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ನಡೆಯಿತು.

ಉತ್ಸವದಲ್ಲಿ   ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥರು, ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರು,ಪೇಜಾವರ ಕಿರಿಯ ಮಠಾಧೀಶರಾದ  ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.