ಉಡುಪಿ: ಕೃಷ್ಣಮಠದಲ್ಲಿ ಸುವರ್ಣಗೋಪುರ ಶಿಖರ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪೂರ್ವಭಾವಿಯಾಗಿ ಹಾಗೂ ಮಳೆಗಾಗಿ ಬುಧವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಚಂದ್ರಮೌಳೇಶ್ವರ ಹಾಗೂ ಅನಂತೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಪಲಿಮಾರು ವಿದ್ಯಾಧೀಶ ಶ್ರೀಪಾದರು, ಅದಮಾರು ಕಿರಿಯ ಈಶಪ್ರಿಯ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ವಿದ್ಯಾರಾಜೇಶ್ವರ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು.
ಪರ್ಯಾಯ ಮಠದ ದಿವಾನ ವೇದವ್ಯಾಸ ತಂತ್ರಿ, ಪುರೋಹಿತ ಮಧುಸೂದನ ಆಚಾರ್ಯ, ಮಠದ ಪಿಆರ್‌ಒ ಶ್ರೀಶ ಭಟ್ ಕಡೆಕಾರ್, ಸಚ್ಚಿದಾನಂದ ರಾವ್, ರಾಮಮೂರ್ತಿ ಭಟ್ ಉಪಸ್ಥಿತರಿದ್ದರು.