ಕೃಷ್ಣಮಠ: ವೈಭವದ ಶೋಭಾಯಾತ್ರೆ

ಉಡುಪಿ:ಕೃಷ್ಣಮಠದ ಗರ್ಭಗುಡಿಗೆ ಸುವರ್ಣಗೋಪುರ ಸಮರ್ಪಿಸುವ ಹಿನ್ನೆಲೆಯಲ್ಲಿ ನಗರದ
ಜೋಡುಕಟ್ಟೆಯಿಂದ ಕೃಷ್ಣಮಠದವರೆಗೆ ಶನಿವಾರ ವೈಭವದ ಶೋಭಾಯಾತ್ರೆ ನಡೆಯಿತು.
ಜಿಲ್ಲೆಯ ವಿವಿಧ ಭಜನಾ ಮಂಡಳಿಯ ತಂಡಗಳು, ಜಾನಪದ ತಂಡಗಳು, ಸಾಂಸ್ಕೃತಿಕ ಕಲಾ ತಂಡಗಳು, ಟ್ಯಾಬ್ಲೊ ಮೆರವಣಿಗೆಗೆ ಚಂಡೆ, ಡೋಲು ವಾದನ ಹಾಗೂ
ಸ್ಥಳೀಯ ಸಾಂಸ್ಕೃತಿಕ ತಂಡಗಳ ಜಾನಪದ ನೃತ್ಯ ಗಮನ ಸೆಳೆಯಿತು. ವಿಶ್ವೇಶತೀರ್ಥ ಸ್ವಾಮೀಜಿ ಶುಭ ಹಾರೈಸಿದರು.
ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ. ರಘುಪತಿ ಭಟ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ
ನಳಿನಿ ಪ್ರದೀಪ್‌ ರಾವ್‌, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,
ಬಿಜೆಪಿ ಮುಖಂಡರಾದ ಉದಯಕುಮಾರ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ಪ್ರಭಾಕರ ಪೂಜಾರಿ,
ಧರ್ಮದರ್ಶಿ ಹರಿಕೃಷ್ಣ ಪುನರೂರು, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಜಿ.
ಶಂಕರ್‌, ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಸಹ ಕುಲಾಧಿಪತಿ ಡಾ. ಎಚ್‌.ಎಸ್‌.
ಬಲ್ಲಾಳ್‌, ಉದ್ಯಮಿಗಳಾದ ಮನೋಹರ್‌ ಶೆಟ್ಟಿ, ಭುವನೇಂದ್ರ ಕಿದಿಯೂರು, ಪ್ರಸಾದ್‌ರಾಜ್‌
ಕಾಂಚನ್‌, ಜೆರ್ರಿ ವಿನ್ಸೆಂಟ್‌ ಡಯಾಸ್‌ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.