ಚಂದ್ರಯಾನ ‌ಯಶಸ್ಸಿಗೆ ಇಸ್ರೋ ದಿಂದ‌ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರಾರ್ಥನೆ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಇಸ್ರೋದ ಅಧ್ಯಕ್ಷ ಕೆ.ಶಿವನ್ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದು, ಜು 15ರಂದುನಡೆಯಲಿರುವ ಚಂದ್ರಯಾನಕ್ಕೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.