ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ ಯೋಜನೆಯಾದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ಗರ್ಭಗುಡಿಯ ಶಿಖರಗಳ,ಕಲಶಾಭಿಷೇಕದ ರಜತಕಲಶಗಳ ಶೋಭಾಯಾತ್ರೆಯು ಜೋಡುಕಟ್ಟೆಯಿಂದ ಕೃಷ್ಣಮಠದ ತನಕ ನಡೆಯಿತು. ಶೋಭಾಯಾತ್ರೆಯನ್ನು ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹಾಗೂ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು ಉದ್ಘಾಟಿಸಿದರು.