ಶ್ರೀ ಕೃಷ್ಣ ಮಠದಲ್ಲಿ ಚೂರ್ಣೋತ್ಸವ ಹಾಗೂ ಅವಭ್ರತ ಉತ್ಸವ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ ಸುವರ್ಣಗೋಪುರ, ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ನಡೆದ ಸಪ್ತೋತ್ಸವದ ಕೊನೆಯ ದಿನದಂದು ಚೂರ್ಣೋತ್ಸವ ಹಾಗೂ ಅವಭ್ರತ ನಡೆಯಿತು.

ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮತ್ತು ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಭಕ್ತರೊಂದಿಗೆ ಬ್ರಹ್ಮರಥವನ್ನು ಎಳೆದು ಭಾಗವಹಿಸಿದರು.