ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ರೋಟರಿ ಉಡುಪಿ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ಜಿಲ್ಲಾ ಸಂಸ್ಥೆ ಉಡುಪಿ ಇದರ ಸಹಯೋಗದಲ್ಲಿ ಜೂ. 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪರ್ಯಾಯ ಪಾಲಿಅಮ್ರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹಿಸಿದರು.
ಉಡುಪಿ ರೋಟರಿ ಅಧ್ಯಕ್ಷ ಜನಾರ್ದನ್ ಭಟ್,ಕಾರ್ಯದರ್ಶಿ ರಾಮಚಂದ್ರ ಐತಾಳ್,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಜಯಚಂದ್ರ ರಾವ್,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ಉಪಸ್ಥಿತರಿದ್ದರು.ಡಾ.ಗಣೇಶ್ ಭಟ್ ಪ್ರಾತ್ಯಕ್ಷಿಕೆ ನೀಡಿದರು,ರಾಮಚಂದ್ರ ಉಪಾಧ್ಯಾಯರು ಕಾರ್ಯಕ್ರಮ ನಿರ್ವಹಿಸಿದರು.