ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಜುಲೈ ಆವೃತ್ತಿಯಲ್ಲಿ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲೂ, ಬಿ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಬಿ.ಎಸ್ಸಿ, ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾo, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂ, ಎಂ.ಲಿಬ್.ಐ.ಎಸ್.ಸ್ಸಿ ಮತ್ತು ಎಲ್ಲಾ ಎಂ.ಎಸ್ಸಿ ಪದವಿಗಳು ಮತ್ತು ಡಿಪ್ಲೋಮಾ, ಪಿಜಿ ಡಿಪ್ಲೋಮಾ ಸರ್ಟಿಫಿಕೆಟ್ ಕೋರ್ಸ್ಗಳ ಪ್ರವೇಶಾತಿಗಳು ನಡೆಯುತ್ತಿದ್ದು, ಆಸಕ್ತರು ಪ್ರಾದೇಶಿಕ ಕೆಂದ್ರದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ http://www.ksoumysuru.ac.inಅನ್ನು ಅಥವಾ ಮೊ.ನಂ: 8197818807, 8970636111, 8431406150 ಮತ್ತು 9449499139 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆ.ಎಸ್.ಓ.ಯು ಉಡುಪಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

















