ಉಡುಪಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕ ಹೃದಯಾಘಾತದಿಂದ ಮೃತ್ಯು

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರೋರ್ವರು ಕರ್ತವ್ಯದಲ್ಲಿದ್ದಾಗಲೇ ಬಸ್ ನಲ್ಲಿ ಹೃದಯಾಘಾತವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್ ನ ಮಲಯಮಾರುತ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಕೆಎಸ್‌ಆರ್‌ಟಿಸಿ ನಿರ್ವಾಹಕ ಸಖರಾಯಪಟ್ಟಣ ಬಳಿ ಕುನ್ನಾಳು ಗ್ರಾಮದ ನಿವಾಸಿ ವಿಜಯ ಕುಮಾರ್ (42) ಎಂದು ಗುರುತಿಸಲಾಗಿದೆ.

ಬಸ್ ಚಿಕ್ಕಮಗಳೂರು ನಗರ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ಉಡುಪಿಗೆ ಬಸ್ ಹೊರಟಿತ್ತು. ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನ ಮಲಯಮಾರುತ ಬಳಿ ಸಾಗುವಾಗ ನಿರ್ವಾಹಕ ವಿಜಯ ಕುಮಾರ್ ಅಸ್ವಸ್ಥರಾಗಿದ್ದಾರೆ.

ತಕ್ಷಣವೇ ಚಾಲಕ ಮತ್ತು ಕೊಟ್ಟಿಗೆಹಾರ ನಿಲ್ದಾಣ ನಿರೀಕ್ಷಕ ಬಣಕಲ್ ಆರೀಫ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಚಿಕಿತ್ಸೆ ಫಲಿಸದೇ ಅಲ್ಲಿ ವಿಜಯ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.