ಜಾರ್ಕಳ ಬಳಿ ಕೆಎಸ್ ಆರ್ ಟಿಸಿ ಬಸ್- ಸ್ಕೂಟರ್ ಮಧ್ಯೆ ಭೀಕರ ಅಪಘಾತ; ದಂಪತಿ ಗಂಭೀರ

ಕಾರ್ಕಳ: ಕೆಎಸ್ ಆರ್ ಟಿಸಿ ಬಸ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ದಂಪತಿಗಳಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಜಾರ್ಕಳ ಬಳಿ ಇಂದು ಸಂಜೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ದಂಪತಿಗಳು ಜಾರ್ಕಳ ನಿವಾಸಿಗಳೆಂದು ತಿಳಿದು ಬಂದಿದೆ. ಇವರು ಜಾರ್ಕಳ ಕ್ರಾಸ್ ನಲ್ಲಿ ಬಸ್ ಅನ್ನು ಗಮನಿಸದೆ ಒಮ್ಮೇಲೆ ರಸ್ತೆ ಕ್ರಾಸ್ ಮಾಡಿದ್ದಾರೆ.

ಇದರ ಪರಿಣಾಮ ಕಾರ್ಕಳದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ದಂಪತಿಗಳು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ದಂಪತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.