ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ಚುನಾವಣೆ
ನಡೆಯಲಿರುವುದರಿಂದ ಮೇ 9 ಹಾಗೂ 10 ರಂದು ಚುನಾವಣಾ ಕರ್ತವ್ಯದ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದ್ದು, ರಾಜ್ಯ ಸಾರಿಗೆ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕ ಪ್ರಯಾಣಿಕರು ಕ.ರಾ.ರ.ಸಾ ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.