ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಮೇ 3 ರಂದು ಅಂಕೋಲದ ಹಟ್ಟಿಕೇರಿಯಲ್ಲಿ ನಡೆಯುವ ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿರುವುದರಿಂದ, ಸದ್ರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ಧಾಪುರ, ಬೈಂದೂರು ಹಾಗೂ ಭಟ್ಕಳ ವಲಯ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ
ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.