ಒಬಿಸಿ ಮೋರ್ಚಾ ವತಿಯಿಂದ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಸನ್ಮಾನ

ಉಡುಪಿ: ಕಳೆದ ಮೂರು ವರ್ಷಗಳಿಂದ ಜಿಲ್ಲೆಯಾದ್ಯಂತ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನಾತ್ಮಕವಾಗಿ ಸದೃಢಗೊಳಿಸುವ ಜೊತೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಂಘಟಿತ ಪ್ರಯತ್ನದ ಮೂಲಕ ಉಡುಪಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಜಿಲ್ಲೆಯ ನೇತೃತ್ವ ವಹಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್, ಅರುಣ್ ಕುಮಾರ್ ಬಾಣ ಹಾಗೂ ಪಕ್ಷದ ಪ್ರಮುಖರು, ಜಿಲ್ಲಾ ಒಬಿಸಿ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು, ಒಬಿಸಿ ಮೋರ್ಚಾ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.