ಉಡುಪಿ: ಕುಕ್ಕೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ವಿಜೇತ್ ಕುಮಾರ್ ಅವರ ನೇತೃತ್ವದಲ್ಲಿ ಕೋವಿಡ್-19 ಲಸಿಕಾ ಅಭಿಯಾನ ಇಂದು ಬೆಳ್ಳರ್ಪಾಡಿ ಶಾಲೆಯಲ್ಲಿ ಯಶಸ್ವಿಯಾಗಿ ನಡೆಯಿತು.
102 ಫಲಾನುಭವಿಗಳಿಗೆ ಕೋವಿಡ್ ಶಿಲ್ಡ್ ಲಸಿಕೆ ನೀಡಲಾಯಿತು. ಕುಕ್ಕೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅರ್ಚನಾ ಹೆಗ್ಡೆ, ಸಿಬ್ಬಂದಿಗಳಾದ ನವೀನ್ ಪ್ರಭು, ಕಲಾವತಿ, ಮಲಾತಿ ಹಾಗೂ ಆಶಾ ಕಾರ್ಯಕರ್ತೆ ಜಯಲಕ್ಷ್ಮೀ ಅವರು ಲಸಿಕಾ ಅಭಿಯಾನಕ್ಕೆ ಸಹಕರಿಸಿದರು.
ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಬೆಳ್ಳರ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶಿವರಾಮ ಶೆಟ್ಟಿ, ಪಂಚಾಯತ್ ಸದಸ್ಯರಾದ ಸತೀಶ್ ಶೆಟ್ಟಿ, ಹರೀಶ್ ನಾಯಕ್, ರೋಹಿತ್ ಶೆಟ್ಟಿ, ನಿತಿನ್ ಶೆಟ್ಟಿ ಉಪಸ್ಥಿತರಿದ್ದರು.