ತೆಕ್ಕಟ್ಟೆ: ಕುಲಾಲ ಸಮಾಜ ಸುಧಾರಕ ಸಂಘ ಕುಂದಾಪುರ ಇವರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೈಂದೂರು ಇವರ ಸಾರಥ್ಯದಲ್ಲಿ ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ಕುಲಾಲ ಸಮಾಜ ಬಾಂಧವರಿಗಾಗಿ ಕುಲಾಲ ಕ್ರೀಡೋತ್ಸವ ಡಿ. 25 ರಂದು ಬಿದ್ಕಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಜ್ಯ ಕುಲಾಲ ಕುಂಬಾರರ ಮಹಾಸಂಘ ಬೆಂಗಳೂರು ಇದರ ಗೌರವಾಧ್ಯಕ್ಷ ಡಾ|ಎಂ. ವಿ ಕುಲಾಲ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ದೇವರಾಜ ಅರಸು ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ|ಅಣ್ಣಯ್ಯ ಕುಲಾಲ್ ಉಳ್ತೂರು ಭಾಗವಹಿಸಲಿದ್ದು, ಕುಲಾಲ ಸಮಾಜ ಸುಧಾರಕ ಸಂಘ ಪೆರ್ಡೂರು ಇದರ ಗೌರವಾಧ್ಯಕ್ಷ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಐತು ಕುಲಾಲ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕುಲಾಲ ಕ್ರೀಡೋತ್ಸವ ಸಮಿತಿಯ ಅಧ್ಯಕ್ಷ ರಾಘವೇಂದ್ರ ಕುಲಾಲ ಹೆಮ್ಮಾಡಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.